ಮುಲ್ಕಿ: ಪಡುಪಣಂಬೂರು ಮುಲ್ಕಿ ಅರಮನೆಯ ಧರ್ಮಚಾವಡಿಯಲ್ಲಿ ಅರಸು ರಕ್ಷಕ ಯೋಜನೆ ಹಾಗೂ ಅರಸು ಶಿಕ್ಷಣ ಸಮೃದ್ಧಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಬೆಂಗಳೂರು ವಾಣಿ ಸಮೂಹ ಸಂಸ್ಥೆ ಮುಖ್ಯಸ್ಥರಾದ ಶಾರದಾ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಮುಲ್ಕಿ ಅರಮನೆ ವತಿಯಿಂದ ಜನರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯಕ್ರಮಗಳು ನಿರಂತರವಾಗಿರಲಿ ಎಂದರು.
ಅಧ್ಯಕ್ಷತೆಯನ್ನು ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅರಮನೆಯ ಎಂ.ಗೌತಮ್ ಜೈನ್, ಪ್ರಿಯದರ್ಶಿನಿ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್, ನಮ್ಮ ಟಿವಿ ವಾಹಿನಿಯ ಮುಖ್ಯ ನಿರೂಪಕ ನವೀನ್ ಶೆಟ್ಟಿ ಹಾಗೂ ವಿದ್ಯಾಶಂಕರ್,ವಿನೋದ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/01/2025 01:20 pm