ಬೆಳಗಾವಿ: ಮುಂಬರುವ ಬಜೆಟ್ ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಭಾಗದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಿತ್ತೂರು ಕರ್ನಾಟಕ ಸೇನೆಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಕಿತ್ತೂರು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ವಿಶೇಷ ಅನುದಾನ ಒದಗಿಸಬೇಕು. ವಾಯವ್ಯ ಸಾರಿಗೆ ಸಂಸ್ಥೆಯ ಹೆಸರನ್ನು ಕಿತ್ತೂರು ಕರ್ನಾಟಕ ಸಾರಿಗೆ ಎಂದು ಮರುನಾಮಕರಣ ಮಾಡಬೇಕು. ಕಿತ್ತೂರು ಕರ್ನಾಟಕ ಭಾಗದಲ್ಲಿರುವ ಐಟಿ/ಬಿಟಿ ಮತ್ತು ಜವಳಿ ಪಾರ್ಕ್ಗಳನ್ನು ನಿರ್ಮಿಸಿ ವಿಶೇಷ ಅನುದಾನ ನೀಡಬೇಕು. ಸುವರ್ಣ ವಿಧಾನ ಸೌಧಕ್ಕೆ ವಿಭಾಗೀಯ ಕಛೇರಿಗಳನ್ನು ಸ್ಥಳಾಂತರಗೊಳಿಸಿ ಈ ಭಾಗದ ಜನಸಾಮಾನ್ಯರು ಬೆಂಗಳೂರು ಅಲೆದಾಡುವುದನ್ನು ತಪ್ಪಿಸಲು ಮುಂಬರುವ ಬಜೆಟ್ ಅಧಿವೇಶನದಲ್ಲಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.
Kshetra Samachara
10/01/2025 02:01 pm