ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿಯಲ್ಲಿ ನಿರಂತರ ಅಕ್ರಮ ಮರಳುಗಾರಿಕೆ ನಡೆಸುತ್ತಿದೆ. ಅಕ್ರಮ ಮರಳಗಾರಿಕೆ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ದಾಳಿ ವೇಳೆ ಭರ್ಜರಿ ಬೇಟೆ ಸಿಕ್ಕಿದ್ದು, ಸುಮಾರು 60 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇನ್ನು ಅಧಿಕಾರಿಗಳ ದಾಳಿ ವೇಳೆ ಅಕ್ರಮ ಮರಳು ದಂಧೆಕೋರರು ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಅಪಾರ ಪ್ರಮಾಣದ ಮರಳು ಪತ್ತೆಯಾಗಿದೆ, ಅಲ್ದೆ ಮರಳು ತೆಗೆಯಲು ಬಳಸುವ ಮೋಟಾರ್ ಸೇರಿದಂತೆ ವಿವಿಧ ಸಾಮಗ್ರಿಗಳು ಪತ್ತೆಯಾಗಿವೆ. ಇನ್ನೂ ದಾಳಿ ನಡೆಸಿರುವ ಅಧಿಕಾರಿಗಳು ಅಕ್ರಮ ಕುರಿತು ಸಮಗ್ರ ತನಿಖೆ ಕೈಗೊಂಡಿದ್ದಾರೆ.
PublicNext
10/01/2025 03:43 pm