ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂರು ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದೆ.

ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಪೊಲೀಸರು ಅನ್ಸಾರುಲ್ ಶೇಖ್ (25) ಎಂಬಾತನನ್ನು ಬಂಧಿಸಿದ್ದಾರೆ.

ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಯಾದ ಅನ್ಸಾರುಲ್ ಶೇಖ್, ಮೂರು ವರ್ಷಗಳ ಹಿಂದೆ ಇಂಡೋ-ಬಾಂಗ್ಲಾ ಅಂತರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಭಾರತಕ್ಕೆ ನುಸುಳಿಕೊಂಡು ಬಂದಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ ಪ್ರವೇಶಿಸಿ, ಉಡುಪಿಗೆ ಬಂದು ನೆಲೆಸಿದ್ದ ಎನ್ನಲಾಗಿದೆ.

ಕೆಲ ಸಮಯಗಳಿಂದ ಅನ್ಸಾರುಲ್ ಶೇಖ್ ಮಂಗಳೂರಿನ ಮುಕ್ಕದಲ್ಲಿ ಕಟ್ಟಡ ಕಾಮಗಾರಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Edited By : Abhishek Kamoji
PublicNext

PublicNext

10/01/2025 03:44 pm

Cinque Terre

13.43 K

Cinque Terre

0

ಸಂಬಂಧಿತ ಸುದ್ದಿ