ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಚ್ಚಿಲ ಎಸ್ ಡಿಪಿ ಐ ಆಂಬ್ಯುಲೆನ್ಸ್‌ನಲ್ಲಿ ಅವರ ಮೃತ ದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕುಮಾರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
10/01/2025 03:45 pm