ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಗಣರಾಜ್ಯೋತ್ಸವ ಆಚರಣೆಗೆ ಸಕಲ ತಯಾರಿ - ಡಿ.ಸಿ ಗುರುದತ್ ಹೆಗಡೆ

ಶಿವಮೊಗ್ಗ: ಜನವರಿ 26ರಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಸಲಾಗುವ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಂದು ನಗರ ಫ್ರೀಡಂ ಪಾರ್ಕ್‍ನಲ್ಲಿ ಸ್ಥಾಪಿಸಲಾಗಿರುವ ಸಂವಿಧಾನದ ಪೀಠಿಕೆಯ ಉದ್ಘಾಟನೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹ್ವಾನಿತ ಗಣ್ಯರಿಂದ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು. ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ 26ರಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರಲ್ಲದೇ ಧ್ವಜವಂದನೆ ಸ್ವೀಕರಿಸುವರು. ನಂತರ ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿರುವರು. ವಿಶೇಷವಾಗಿ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರ ಗಣರಾಜ್ಯೋತ್ಸವ ಸಂದೇಶದ ನಂತರ ಜಿಲ್ಲೆಯಲ್ಲಿ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ಕ್ರೀಡಾಪಟುಗಳು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ, ಅಸಾಧಾರಣ ಪ್ರತಿಭೆಯ ಮಕ್ಕಳು ಹಾಗೂ ಸರ್ಕಾರಿ ಸೇವೆಯಲ್ಲಿ ಉತ್ತಮ ಸಾಧನೆಗೈದ ನೌಕರರನ್ನು ಗುರುತಿಸಿ ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದವರು ನುಡಿದರು.

ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ತಮ್ಮ ಆಡಳಿತದ ಕಟ್ಟಡಗಳನ್ನು, ನಗರದ ವಿವಿಧ ರಸ್ತೆ, ಸರ್ಕಾರಿ ಕಟ್ಟಡಗಳನ್ನು ಹಸಿರು ತೋರಣಗಳಿಂದ ಹಾಗೂ ವಿದ್ಯುದ್ಧೀಪಗಳಿಂದ ಅಲಂಕರಿಸುವುದು ಹಾಗೂ ವಿವಿಧ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲು ಸಂಬಂಧಿಸಿದ ಉಪಸಮಿತಿಗೆ ಜವಾಬ್ದಾರಿ ವಹಿಸಲಾಯಿತು.

ಅಂದು ಕಾರ್ಯಕ್ರಮದಲ್ಲಿ ಪೊಲೀಸ್‍ತಂಡ, ಪೊಲೀಸ್ ಬ್ಯಾಂಡ್, ಹೋಂಗಾರ್ಡ್ ಸೇರಿದಂತೆ ಶಿವಮೊಗ್ಗ ನಗರದ ಆಯ್ದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸುವರು. ಅಲ್ಲದೇ ಇದೇ ಮೊದಲ ಬಾರಿಗೆ ಶಿವಮೊಗ್ಗ ಮಹಾನಗರಪಾಲಿಕೆಯ ಪೌರಸೇವಾ ಕಾರ್ಮಿಕರು ಸಮವಸ್ತ್ರದೊಂದಿಗೆ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಅಂದು ಸಂಜೆ 4ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕೆ.ಎಸ್.ಆರ್.ಪಿ ಮಾಚೇನಹಳ್ಳಿ ಪೊಲೀಸ್ ತಂಡದವರಿಂದ ಪೊಲೀಸ್ ಬ್ಯಾಂಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಲಾಗಿದ್ದು, ಅದರ ಉಸ್ತುವಾರಿಯನ್ನು ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

10/01/2025 03:51 pm

Cinque Terre

1.04 K

Cinque Terre

0

ಸಂಬಂಧಿತ ಸುದ್ದಿ