ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ರಾಜ್ಯ ಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ

ಕೆಜಿಎಫ್ : ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಭಾಗದ ಬಾಲಕರ ಮತ್ತು ಬಾಲಕಿಯರ ಥ್ರೋಬಾಲ್ ಕ್ರೀಡಾಕೂಟಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಸೇರಿದಂತೆ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದ ಗ್ರಾಮೀಣ ವಿದ್ಯಾ ಸಂಸ್ಥೆಯ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಕರ ಸಂಘ, ಗ್ರಾಮೀಣ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2024-2025-ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾತನಾಡಿ. ಶಿಕ್ಷಣ ಹಾಗೂ ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ದೈಹಿಕ ದೃಢತೆ ಹಿತಾಸಕ್ತಿಯಿಂದ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಿದಾಗ ಜೀವನದಲ್ಲಿ ಉತ್ತಮ ಸಾಧನೆ ಮಾಡಬಾರದು ನಾನು ಸಹ ವಿದ್ಯಾರ್ಥಿ ದಿನಗಳಲ್ಲಿ ಕಬ್ಬಡಿ ಆಟಗಾರನ್ನಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾನೆ, ಕ್ರೀಡೆಯು ಪೊಲೀಸ್ ಹಾಗೂ ಸೈನಿಕ ಹುದ್ದೆಗಳಿಗೆ ಹೋಗುವುದಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

10/01/2025 03:51 pm

Cinque Terre

160

Cinque Terre

0