ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ರಸ್ತೆ ಪಕ್ಕದಲ್ಲಿದ್ದ ಚೀಲದಲ್ಲಿ ನವಜಾತ ಶಿಶು ಪತ್ತೆ…!

ಶಿವಮೊಗ್ಗ : ಶಿವಮೊಗ್ಗ ನಗರದ ಹೊರಭಾಗದ ಶ್ರೀರಾಮಪುರದಲ್ಲಿ ನವಜಾತ ಗಂಡು ಮಗುವೊಂದು ಪತ್ತೆಯಾಗಿದೆ. ರಸ್ತೆ ಪಕ್ಕದಲ್ಲಿದ್ದ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಆಂಬ್ಯುಲೆನ್ಸ್ ಚಾಲಕರು ಮಗುವನ್ನ ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಯ ಶಿಶು ಆರೈಕೆ ಕೇಂದ್ರಕ್ಕೆ ಸೇರಿಸಿದ್ದಾರೆ.

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಪುರದ ಫ್ಲೈ ಓವರ್ ಬಳಿಯ ಬೋರ್ ವೆಲ್ ಬಳಿ ನವಜಾತ ಶಿಶು ಪತ್ತೆಯಾಗಿದೆ. ನವಜಾತ ಶಿಶುವನ್ನ ಸ್ನಾನ‌ಮಾಡಿಸಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ತುಂಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
PublicNext

PublicNext

10/01/2025 04:06 pm

Cinque Terre

12.62 K

Cinque Terre

0

ಸಂಬಂಧಿತ ಸುದ್ದಿ