ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ನಾಡದೋಣಿ ಮೀನುಗಾರರಿಂದ ಪ್ರತಿಭಟನೆ

ಕುಂದಾಪುರ: ಅವೈಜ್ಞಾನಿಕ ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸಲು ಒತ್ತಾಯಿಸಿ ನಾಡದೋಣಿ ಮೀನುಗಾರರು ರಸ್ತೆಗಿಳಿದಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಈ ಬೃಹತ್ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಭಾಗಿಯಾಗಿದ್ದಾರೆ.

ಲೈಟ್ ಫಿಶಿಂಗ್ ನಿಷೇಧ ಮಾಡಬೇಕು ಮತ್ತು ಸೀಮೆಎಣ್ಣೆ ದರ ಕಡಿಮೆ ಮಾಡಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮೀನುಗಾರರು ಸರಕಾರದ ಮುಂದಿಟ್ಟಿದ್ದಾರೆ. ಭಾರೀ ಸಂಖ್ಯೆಯಲ್ಲಿ ಮೀನುಗಾರರು ಪ್ರತಿಭಟನೆ ನಡೆಸುತ್ತಿರುವುದರಿಂದ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಂದಹಾಗೆ ಇಂದು ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆಗೂ ರಜೆ ಘೋಷಿಸಲಾಗಿದೆ.

Edited By : Somashekar
Kshetra Samachara

Kshetra Samachara

10/01/2025 05:26 pm

Cinque Terre

1.77 K

Cinque Terre

0

ಸಂಬಂಧಿತ ಸುದ್ದಿ