ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರಿದ ಬೆಳಗಾವಿ ರಸ್ತೆಯಲ್ಲಿರುವ ಜಮೀನಿನಲ್ಲಿ ಯಾರೋ ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ತಾತ್ಕಾಲಿಕ ದೇವಸ್ಥಾನ ಕೂಡ ನಿರ್ಮಾಣ ಮಾಡಲಾಗಿದೆ. ಆ ದೇವಸ್ಥಾನಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನರೇಂದ್ರದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮತ್ತು ಹಿಂದೂ ದೇವಸ್ಥಾನಗಳ ಜಾಗರಣಾ ಸಮಿತಿ ಸದಸ್ಯರು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಅಯ್ಯಪ್ಪ ಮೂರ್ತಿ ನರೇಂದ್ರ ಗ್ರಾಮಕ್ಕೆ ಬಹಳ ಹತ್ತಿರವಾಗುತ್ತದೆ. ಆ ದೇವಸ್ಥಾನಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕು. ಆ ರಸ್ತೆಯಲ್ಲಿ ಪ್ರತಿನಿತ್ಯ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದವು. ಅವುಗಳನ್ನು ತಪ್ಪಿಸುವುದಕ್ಕಾಗಿಯೇ ಈ ರಸ್ತೆಯಲ್ಲಿ ಅಯ್ಯಪ್ಪ ನೆಲೆಸಿದ್ದಾನೆ ಎಂದು ಕಾಣುತ್ತದೆ.

ಕೆಲ ಹಿಂದೂ ವಿರೋಧಿ ದುಷ್ಟ ಶಕ್ತಿಗಳು ಆ ದೇವಸ್ಥಾನ ತೆರವುಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ತಿಳಿದಿದೆ. ಅದಕ್ಕೆ ಅವಕಾಶ ಕೊಡಬಾರದು. ಅದಕ್ಕೆ ರಕ್ಷಣೆ ನೀಡಬೇಕು. ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಜಮೀನಿನಲ್ಲಿ ಇತರೆ ಧರ್ಮದ ಪ್ರಾರ್ಥನಾ ಮಂದಿರ, ದರ್ಗಾ, ಗೋರಿಗಳಿಗೆ ಅವಕಾಶ ನೀಡಲಾಗಿದೆ. ಅದೇ ಮಾದರಿಯಲ್ಲೇ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇರಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

Edited By : Suman K
Kshetra Samachara

Kshetra Samachara

10/01/2025 05:59 pm

Cinque Terre

19.35 K

Cinque Terre

0

ಸಂಬಂಧಿತ ಸುದ್ದಿ