ಕಾರ್ಕಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಅಡ್ಡೂರು ಎಂಬಲ್ಲಿಯ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ತೆಗೆದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ KL-28-A-3035 ನಂಬರ್‌ನ ಟಿಪ್ಪರ್ ಲಾರಿಯಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಕಾರ್ಕಳದ ಕುಕ್ಕುಂದೂರು ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಇದನ್ನು ಪತ್ತೆ ಹಚ್ಚಿದ ಕಾರ್ಕಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
10/01/2025 06:24 pm