ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ರೈತರು ಹೆಚ್ಚಾಗಿ ಕುರಿ ಮೇಕೆ ಸಾಕಾಣಿಕೆಯಲ್ಲಿ ತೊಡಗಬೇಕು - ವೆಂಕಟೇಶ್

ಕೋಲಾರ : ಕೋಲಾರ ರೈತರು ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಲಾಭಗಳಿಸುವತ್ತ ಗಮನಹರಿಸಬೇಕೆಂದು ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಪಾಕರಹಳ್ಳಿ ಪಿ.ಎಂ.ವೆಂಕಟೇಶ್ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಟಮಕ ಹಾಗೂ ಸಹಕಾರ ಇಲಾಖೆ ಕೋಲಾರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ಕುರಿ ಮತ್ತು ಮೇಕೆ ಸಾಕಾಣಿಕೆ ಸಹಕಾರ ಸಂಘಗಳ ಅಧ್ಯಕ್ಷರು‌ ಮುಖ್ಯಕಾರ್ಯ ನಿರ್ವಣಾಧಿಕಾರಿಗಳು ಮತ್ತು ಸದಸ್ಯರುಗಳಿಗೆ ನಗರದ ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ಇರುವ ಸಲ್ಪಸ್ವಲ್ಪ ಜಮೀನಿನಲ್ಲಿ ಹೆಬ್ಬೇವು, ಅಗಸೆ, ವನ್ನಾರೆ ಸೊಪ್ಪುಗಳನ್ನು ಬೆಳೆಸಿಕೊಂಡು ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡು ಹೆಚ್ಚು ಲಾಭ ಗಳಿಸಿವಂತಾಗಲಿ ಎಂದರು.

Edited By : PublicNext Desk
Kshetra Samachara

Kshetra Samachara

10/01/2025 07:20 pm

Cinque Terre

40

Cinque Terre

0

ಸಂಬಂಧಿತ ಸುದ್ದಿ