ಬೆಳಗಾವಿ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಶೇಕಡಾ 95% ಫಲಾನುಭವಿಗಳಿಗೆ ತಲುಪುತ್ತಿದ್ದು ಉಳಿದವರಿಗೂ ಅವುಗಳ ಅನುಕೂಲ ಕಲ್ಪಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ತಿಳಿಸಿದರು.
ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ನ್ಯಾಯ ಬೆಲೆ ಅಂಗಡಿಗಳಲ್ಲಿ ನಿಯಮಾನುಸಾರ ಪಡಿತರ ವಿತರಣೆ ಮಾಡುತ್ತಿಲ್ಲ ಎಂದು ವ್ಯಾಪಕ ದೂರುಗಳು ಕೇಳಿಬರುತ್ತಿವೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುತ್ತಿರುವ 2 ಸಾವಿರ ಹಣ ತಲುಪದಿದ್ದವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಗುರುತಿಸಿ ದಾಖಲೆ ಪರಿಶೀಲಿಸಿ ತಾಂತ್ರಿಕ ದೋಷ ಸರಿಪಡಿಸಿಕೊಡಬೇಕು ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತರುವಂತೆ ವಿನಯ ನಾವಲಗಟ್ಟಿ ತಿಳಿಸಿದರು.
ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ನೀಡಲು ಬಂದ ಗ್ಯಾಸ್ ಏಜೆನ್ಸಿಗಳಿಂದ ಪ್ರತಿ ಸಿಲೆಂಡರ್‌ಗೆ ಬೆಲೆ ನಿಗದಿಗಿಂತ ಹೆಚ್ಚುವರಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಆಹಾರ ಇಲಾಖೆಯಿಂದ ಗ್ಯಾಸ್ ಏಜೆನ್ಸಿಗಳಿಗೆ ಹೆಚ್ಚು ಹಣ ಪಡೆಯದಂತೆ ಕಡ್ಡಾಯವಾಗಿ ಸೂಚನೆ ನೀಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಚಿಕ್ಕೋಡಿ ಸದಸ್ಯರೊಬ್ಬರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಸೇರಿದಂತೆ ಹೆಸ್ಕಾಂ, ಜಿಲ್ಲಾ ಪಂಚಾಯತ್, ಸಾರಿಗೆ ಸಂಸ್ಥೆ, ವಿವಿಧ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸದಸ್ಯರು, ಸಭೆಯಲ್ಲಿ ಉಪಸ್ಥಿತರಿದ್ದರು.
Kshetra Samachara
10/01/2025 07:33 pm