ಬೆಂಗಳೂರು : ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ, ಸಾರ್ವಜನಿಕರೊಬ್ಬರು ಐಡಿಯಲ್ ಹೋಮ್ಸ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಭಗ್ನಾವಶೇಷಗಳನ್ನು ಹಾಕಿರುವುದರಿಂದ ಓಡಾಟಕ್ಕೆ ಸಮಸ್ಯೆಯಾಗುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ರಸ್ತೆ ಬದಿ ಯಾವುದೇ ಇಲಾಖೆಯಾಗಲಿ, ಸಾರ್ವಜನಿಕರಾಗಲಿ ರಸ್ತೆ ಬದಿ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಈ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಅಧಿಕಾರಿಗಳು, ಮಾರ್ಷಲ್‌ಗಳು ಸೇರಿ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಭಗ್ನಾವಶೇಷ ಹಾಕಿರುವುದನ್ನು ಪರಿಶೀಲನೆ ನಡೆಸಿ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಕೈಗೊಂಡು ಸಂಬಂಧಪಟ್ಟವರಿಗೆ ದಂಡ ವಿಧಿಸಲು ಸೂಚನೆ ನೀಡಿದರು.
PublicNext
10/01/2025 08:17 pm