ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ, ಆದ್ರೂ ಯಾಕೆ ಹೀಗಾಯ್ತು? - BJP, JDS ಮತ್ತು ಕಾಂಗ್ರೆಸ್ ಶಾಸಕರನ್ನ ಪ್ರಶ್ನಿಸಿದ ಸಿಎಂ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕೆ ಹೀಗಾಯ್ತು? ಇಷ್ಟೆಲ್ಲ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ - ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರುಗಳನ್ನ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಸಿಎಂ ಶಾಸಕರುಗಳಿಗೆ ಪ್ರಶ್ನಿಸಿದರು. ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು - ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳು ಕೇಳಿದರು.

ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜನವರಿ 15ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

Edited By : Nagaraj Tulugeri
Kshetra Samachara

Kshetra Samachara

10/01/2025 09:21 pm

Cinque Terre

254

Cinque Terre

0

ಸಂಬಂಧಿತ ಸುದ್ದಿ