ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ - ಪ್ರಿಯಾಂಕ್ ಖರ್ಗೆ ಆಪ್ತ ರಾಜು ಸೇರಿ ಐವರ ಬಂಧನ

ಬೀದರ್: ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಶುಕ್ರವಾರ ಬಂಧಿಸಿದ್ದಾರೆ.

ರಾಜು ಕಪನೂರ್, ಗೊರಕನಾಥ್, ನಂದಕುಮಾರ್ ನಾಗಭುಜಂಗೆ, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಅವರನ್ನು ಬಂಧಿಸಿ ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಚಿನ್ ಪಾಂಚಾಳ್ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು, ಈ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಜ.6ರಂದು ತನಿಖಾ ತಂಡವಾದ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ವಿಚಾರಣೆಗೆ ಆಗಮಿಸಿದ ಐವರನ್ನು ಇಂದು ಬಂಧಿಸಲಾಗಿದೆ.

Edited By : Abhishek Kamoji
PublicNext

PublicNext

10/01/2025 09:41 pm

Cinque Terre

21.12 K

Cinque Terre

2

ಸಂಬಂಧಿತ ಸುದ್ದಿ