ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜನವರಿ 13ರಿಂದ ಕೆಸೆಟ್ ಅಭ್ಯರ್ಥಿಗಳ ದಾಖಲೆ ಪರಿಶೀಲನೆ - ಮುಖ್ಯಮಂತ್ರಿಯಿಂದ ಪ್ರಮಾಣಪತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ - 2024 (ಕೆಸೆಟ್)ಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟಗೊಂಡಿರುವ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಜನವರಿ 13ರಂದು ಆರಂಭವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೆ ಅಂದು ಚಾಲನೆ ನೀಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶುಕ್ರವಾರ ಹೇಳಿದ್ದಾರೆ.

ಜನವರಿ 20ರವರೆಗೆ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ದಾಖಲೆಗಳು ಸಮರ್ಪಕವಾಗಿದ್ದರೆ ಸ್ಥಳದಲ್ಲೇ ಪ್ರಮಾಣಪತ್ರ ನೀಡಲಾಗುವುದು. ಜನವರಿ 13ರಂದು ಮುಖ್ಯಮಂತ್ರಿಯವರು ಕೆಇಎ ಕಚೇರಿಯಲ್ಲಿ ಹೆಚ್ಚುವರಿ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅದೇ ಸಂದರ್ಭದಲ್ಲಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೂ ಚಾಲನೆ ನೀಡಲಿದ್ದಾರೆ ಎಂದು ಪ್ರಸನ್ನ ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ಬಗೆಗಿನ ಮಾಹಿತಿಯನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದೇ ಹಾಜರಾಗಬೇಕು. ನಿಗದಿ ಪಡಿಸಿದ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳಿಗೆ ಇತರೆ ದಿನಾಂಕದಂದು ಮೂಲ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

10/01/2025 09:47 pm

Cinque Terre

364

Cinque Terre

0

ಸಂಬಂಧಿತ ಸುದ್ದಿ