ಬೀದರ್: ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಶುಕ್ರವಾರ ಬಂಧಿಸಿದ್ದಾರೆ.
ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್‌ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್‌ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡ ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು.
ಸಿಐಡಿ ನೋಟಿಸ್ ಹಿನ್ನೆಲೆಯಲ್ಲಿ ಗುರುವಾರ ಬೀದರ್‌ನ ರೈಲ್ವೆ ಇಲಾಖೆಯ ಕಚೇರಿಯಲ್ಲಿನ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು, ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು.
ಈ ಬಳಿಕ ಐವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸಲ್ಲಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ 8 ಮಂದಿಯಲ್ಲಿ ಐವರನ್ನು ಸಿಐಡಿ ಬಂಧಿಸಿದೆ.
PublicNext
11/01/2025 08:45 am