ರಾಯಭಾಗ: ಕಬ್ಬು ತುಂಬಿದ ಟ್ರ್ಯಾಕ್ಟರ್ ಒಂದು ರಸ್ತೆ ತಿರುವಿನಲ್ಲಿ ರಭಸದಿಂದ ಗೂಡಂಗಡಿ ಮೇಲೆ ಬಿದ್ದ ಘಟನೆ ಹಾರೋಗೇರಿ ಪಟ್ಟಣದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೋಗೇರಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಸಾಗುವ ವೇಳೆ ಕಬ್ಬು ತುಂಬಿದ ಟ್ರ್ಯಾಕ್ಟರ್ ನ ಮುಂದಿನ ಟ್ರಾಲಿ ಪಲ್ಟಿಯಾಗಿದೆ.
ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾದ ಭಯಾನಕ ದೃಶ್ಯ ಸ್ಥಳೀಯ ಅಂಗಡಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Kshetra Samachara
11/01/2025 01:07 pm