ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೊಸ ರೂಪ ಪಡೆದ ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿದ ಗಣ್ಯರು

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಡಿಯಲ್ಲಿ 50.58 ಕೋಟಿ ರೂಪಾಯಿಯಲ್ಲಿ ಹೊಸ ರೂಪ ಪಡೆದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣವನ್ನು ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಇಂದು ಲೋಕಾರ್ಪಣೆ ಮಾಡಿದರು.

ಹುಬ್ಬಳ್ಳಿಗೆ ಕಳಸ ಅಂದ್ರೆ ಅದು ಹಳೇ ಬಸ್ ನಿಲ್ದಾಣ. ಹಳೇ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ಸುಮಾರು ಮೂರ್ನಾಲ್ಕು ವರ್ಷಗಳ ಕಾಲ ಕಳೆದು ಈಗ ಕಾರ್ಯರೂಪಕ್ಕೆ ಕಾಲಿಟ್ಟಿದೆ. ಹಳೇ ಬಸ್ ನಿಲ್ದಾಣ ಕಾಮಗಾರಿ ಮುಗಿದು ಉದ್ಘಾಟನೆ ಬಗ್ಗೆ ಈಗಾಗಲೇ ಪಬ್ಲಿಕ್ ನೆಕ್ಸ್ಟ್ ದಲ್ಲಿ ಸಾಕಷ್ಟು ಸುದ್ದಿಯನ್ನು ಬಿತ್ತರಿಸಿತ್ತು. ಇಂದು ಸ್ಮಾರ್ಟ್ ಸಿಟಿ ಅಧಿಕಾರಿಗಳು ಗಣ್ಯರಿಂದ ಲೋಕಾರ್ಪಣೆ ಮಾಡಿಸಿದ್ದಾರೆ. ಅತೀ ಸುಂದರವಾಗಿ, ಅಚ್ಚುಕಟ್ಟಾಗಿ ಹಳೇ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿ, ನಗರ ಮತ್ತು ಉಪನಗರ ಸಾರಿಗೆ ಬಸ್ ನಿಲ್ದಾಣವನ್ನಾಗಿ ನಾಮಕರಣ ಮಾಡಿದ್ದಾರೆ. ಸುಮಾರು 3.7 ಎಕರೆಯಲ್ಲಿ ಈ ನೂತನ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿದ್ದಾರೆ. 8 ಪ್ಲ್ಯಾಟ್‌ಫಾರ್ಂ, ಎರಡು ಲಿಫ್ಟ್‌ಗಳಿಂದ ಬಸ್ ನಿಲ್ದಾಣವನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಉದ್ಘಾಟನೆ ಮಾಡಿದ ಗಣ್ಯರು ಏನು ಹೇಳಿದ್ದಾರೆ ಕೇಳಿ.

ಇನ್ನು ಅಂತೂ ಇಂತು ಹಳೇ ಬಸ್ ನಿಲ್ದಾಣ ಈಗ ಲೋಕಾರ್ಪಣೆಗೊಂಡಿದ್ದು, ಆದಷ್ಟು ಬೇಗನೇ ಕಾರ್ಯರೂಪಕ್ಕೆ ತಂದು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ. ಈ ಸ್ಮಾರ್ಟ್ ಸಿಟಿ ಅಡಿಯಲ್ಲಿ ನಿರ್ಮಾಣವಾದ ನಗರ ಮತ್ತು ಉಪನಗರ ಬಸ್ ನಿಲ್ದಾಣವನ್ನಾಗಿ ಮಾಡಿದ್ದು, ಇಂದಿನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ಪ್ರದೀಪ್ ಶೇಟ್ಟರ್, ಎಮ್. ಆರ್ ಪಾಟೀಲ್, ಅಜಂಪೀರ್ ಖಾದ್ರಿ, ಮೇಯರ್ ರಾಮಣ್ಣ ಬಡಿಗೇರ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/01/2025 04:32 pm

Cinque Terre

250.28 K

Cinque Terre

24

ಸಂಬಂಧಿತ ಸುದ್ದಿ