ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಳೆದ 4 ದಿನಗಳಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.
ಸರಿಗಮ ವಿಜಯ್ ಅವರು 269 ಚಿತ್ರಗಳಲ್ಲಿ ನಟಿಸಿದ್ದು, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ.
PublicNext
12/01/2025 05:05 pm