ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದರ್ಶನ್ ಗನ್ ಲೈಸೆನ್ಸ್ ರದ್ದುಗೊಳಿಸಲು ಮುಂದಾದ ಪೊಲೀಸರು - ಸ್ಪಷ್ಟನೆ ಕೋರಿ ನೋಟಿಸ್ ಜಾರಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ರದ್ದುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಗನ್ ಲೈಸೆನ್ಸ್ ಬಗ್ಗೆ 1 ವಾರದಲ್ಲಿ ಸ್ಪಷ್ಟನೆ ನೀಡುವಂತೆ ನಟ ದರ್ಶನ್ ಅವರಿಗೆ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ ನೋಟೀಸ್ ನೀಡಿದ್ದಾರೆ.

ಹತ್ಯೆ ಪ್ರಕರಣದ ಆರೋಪಿಯಾಗಿರುವ ನೀವು ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಲೈಸೆನ್ಸ್ ಹೊಂದಿರುವ ಗನ್‌ನ್ನ ಬಳಸಿ ಸಾಕ್ಷಿಗಳನ್ನ ಬೆದರಿಸುವ ಬಗ್ಗೆ ಅನುಮಾನಗಳಿವೆ. ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡಬೇಕಿದೆ. ಆದ್ದರಿಂದ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡುವಂತೆ ದರ್ಶನ್ ಅವರಿಗೆ ನೋಟಿಸ್ ನೀಡಲಾಗಿದೆ.

ನೋಟಿಸ್‌ಗೆ ಉತ್ತರ ನೀಡಿದ ಬಳಿಕ ಗನ್ ಲೈಸೆನ್ಸ್ ರದ್ದುಪಡಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

12/01/2025 05:33 pm

Cinque Terre

178.15 K

Cinque Terre

1