ಬ್ರಹ್ಮಾವರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ಮತ್ತು ನಾನಾ ಸಂಘಸಂಸ್ಥೆ ಸಾರ್ವಜನಿಕರ ಸಹಭಾಗಿತ್ವದಲ್ಲಿ, ಬ್ರಹ್ಮಾವರ ಸರಕಾರಿಪದವಿ ಪೂರ್ವ ಕಾಲೇಜು ಮತ್ತು ಎಸ್ಎಂಎಸ್ ಕಾಲೇಜು 2 ಕ್ರೀಡಾಂಗಣದಲ್ಲಿ ಜನವರಿ 11 ಮತ್ತು 12 ರಂದು ಏಕ ಕಾಲದಲ್ಲಿ ರಾಜ್ಯಮಟ್ಟದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ 2025 ಜರುಗಿತು.
ಶನಿವಾರ ಸಂಜೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾಧಿಕಾರಿ ಡಾ, ವಿದ್ಯಾಕುಮಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ ಉಪನಿರ್ದೇಶಕ ಗಣಪತಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು 2 ಕ್ರೀಡಾಂಗಣದಲ್ಲಿ ರಾಜ್ಯದ 35 ಶೈಕ್ಷಣಿಕ ಜಿಲ್ಲೆಯಿಂದ 32 ಜಿಲ್ಲೆಯ 900 ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದ್ದರು. ಪೋಷಕರು, ಪ್ರತಿ ಜಿಲ್ಲಾ ಕ್ರೀಡಾಧಿಕಾರಿಗಳು 120 ದೈಹಿಕ ಶಿಕ್ಷಣ ಶಿಕ್ಷಕರು, 8 ಬಿ.ಐ.ಇ.ಆರ್.ಟಿ ಗಳು, 30 ಇತರ ಶಿಕ್ಷಕರು ಸ್ವಯಂ ಸೇವಕರು ಭಾಗವಹಿಸಿದ್ದರು.
PublicNext
13/01/2025 08:15 am