ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಭಾನುವಾರ ಟೆಂಪೋವೊಂದು ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ನಿಫಾಡ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಿಂದ 16 ಪ್ರಯಾಣಿಕರನ್ನು ಹೊತ್ತ ಟೆಂಪೋ ಹಿಂತಿರುಗುತ್ತಿದ್ದಾಗ ಸಂಜೆ 7:30ಕ್ಕೆ ಅಯ್ಯಪ್ಪ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಟೆಂಪೋ ನಾಸಿಕ್‌ನ ಸಿಡ್ಕೊ ಪ್ರದೇಶಕ್ಕೆ ತೆರಳುತ್ತಿತ್ತು.
ಚಾಲಕ ನಿಯಂತ್ರಣ ಕಳೆದುಕೊಂಡ ಟೆಂಪೋ ಮುಂದೆ ಹೋಗುತ್ತಿದ್ದ ಕಬ್ಬಿಣದ ರಾಡ್‌ಗಳನ್ನು ಹೊತ್ತ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಲವಾರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ, ಅದರಲ್ಲಿ 2 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ನಿವಾಸಿಗಳು ಮತ್ತು ದಾರಿಹೋಕರು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
PublicNext
13/01/2025 11:11 am