ಮಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡ ಸೂಪರ್ ಹಿಟ್ ಸಿನಿಮಾ "ಚಾರ್ಲಿ 777'' ನಿರ್ದೇಶಕ ಕಿರಣ್ ರಾಜ್‌ಗೆ ಕಂಕಣ ಬಲ ಕೂಡಿ ಬಂದಿದೆ. ರವಿವಾರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮಂಗಳೂರಿನ ದಿ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನಯ ವಸುಧಾರೊಂದಿಗೆ ಉಂಗುರ ಬದಲಾಯಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಉಪಸ್ಥಿತರಿದ್ದರು.
ಕಿರಣ್ ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರಾಗಿದ್ದು, ಅನಯ ವಸುಧಾ ಕೂಡ ಕಾಸರಗೋಡು ಮೂಲದವರಾಗಿದ್ದಾರೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾವನ್ನು ಕಿರಣ್ ನಿರ್ದೇಶನ ಮಾಡಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ವಿಭಿನ್ನ ಕಥಾ ಹಂದರವಿದ್ದ, ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿ ಕಿರಣ್ ಅವರಿಗೆ ಚಂದನವನದಲ್ಲಿ ಹೆಸರು ತಂದುಕೊಟ್ಟಿತ್ತು.
PublicNext
13/01/2025 11:47 am