ಹಾವೇರಿ: ತಡರಾತ್ರಿ ಮನೆಯಲ್ಲಿ ಫ್ರಿಡ್ಜ್ ಬ್ಲಾಸ್ಟಾಗಿ ಮನೆ ಸುಟ್ಟು ಕರಕಲಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಮಂಜುನಾಥ ನಗರದ ಚನ್ನಬಸಪ್ಪ ಗೂಳಪ್ಪನವರ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ.
ಫ್ರಿಡ್ಜ್ ಸ್ಫೋಟಕ್ಕೆ ಚನ್ನಬಸಪ್ಪ ಗೂಳಪ್ಪನವರ್ ಮನೆಯಲ್ಲಿನ ವಸ್ತುಗಳು ಸುಟ್ಟು ಹೋಗಿವೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
13/01/2025 01:15 pm