2025ರ ಚಾಂಪಿಯನ್ಸ್ ಟ್ರೋಫಿಗೆ ಆಸ್ಟ್ರೇಲಿಯಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡವನ್ನು ಪ್ಯಾಟ್ ಕಮ್ಮಿನ್ಸ್ ಮುನ್ನಡೆಸಲಿದ್ದಾರೆ.
ಮ್ಯಾಟ್ ಶಾರ್ಟ್ ಮತ್ತು ಆರನ್ ಹಾರ್ಡಿ ಐಸಿಸಿ ಟೂರ್ನಿಗೆ ಎಂಟ್ರಿ ಪಡೆದಿದ್ದಾರೆ. ತಂಡದಲ್ಲಿ ನಾಥನ್ ಎಲ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಇದ್ದಾರೆ. ಅಫ್ಘಾನಿಸ್ತಾನ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಜೊತೆಗೆ ಆಸ್ಟ್ರೇಲಿಯಾ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ.
PublicNext
13/01/2025 02:02 pm