", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/405356-1736757798-ayaaaa.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Guruprasad Bng" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ಸರ್ಕಾರ ರಚನ...Read more" } ", "keywords": "Doddaballapura, Ghati Subramanya Temple, Karnataka Tourism, Temple Development Authority, Kukke Subramanya, Pilgrimage Tourism, Temple Infrastructure Development, Karnataka Government Initiatives, Religious Tourism,Bangalore,Bangalore-Rural,Politics,Infrastructure", "url": "https://publicnext.com/node" } ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ, 2ನೇ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಅಭಿವೃದ್ಧಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ, 2ನೇ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಅಭಿವೃದ್ಧಿ

ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ಸರ್ಕಾರ ರಚನೆ ಮಾಡಿತ್ತು. ಪ್ರಾಧಿಕಾರಕ್ಕೆ ನೂತನವಾಗಿ 5 ಮಂದಿ ನಾಮನಿರ್ದೇಶಿತರನ್ನ ಆಯ್ಕೆ ಮಾಡುವ ಮೂಲಕ ಪ್ರಾಧಿಕಾರಕ್ಕೆ ಚಾಲನೆಯನ್ನ ನೀಡಿದೆ.

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ, ನಾಗಾರಾಧನೆಯ ಕ್ಷೇತ್ರವಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಬರುವ ದೇವಸ್ಥಾನಗಳಲ್ಲಿಯೂ ಒಂದಾಗಿದೆ. ಕ್ಷೇತ್ರವನ್ನ ಮತ್ತಷ್ಟು ಅಭಿವೃದ್ಧಿಗೆ ಮುಂದಾಗಿರುವ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಪ್ರಾಧಿಕಾರಕ್ಕೆ ನೂತನವಾಗಿ ರಂಗಪ್ಪ, ರವಿ ಕೆ.ಎಸ್ ,ಲಕ್ಷ ನಾಯಕ, ಆರ್.ವಿ.ಮಹೇಶ್ ಕುಮಾರ್, ಎಂ ಹೇಮಲತಾರವರನ್ನು ನಾಮನಿರ್ದೇಶಿತರಾಗಿ ಆಯ್ಕೆ ಮಾಡಿ, ನೂತನ ಸದಸ್ಯರನ್ನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಭಿನಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ದುಡಿಯುವಂತೆ ಸಲಹೆ ನೀಡಿದರು.

ಮಾಧ್ಯಮದೊಂದಿಗೆ ಮಾತನಾಡಿದ ಪ್ರಾಧಿಕಾರದ ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್, ಜಾತ್ರೆ ಸಮಯದಲ್ಲಿ ಭಕ್ತರು ಸಾರ್ವಜನಿಕರು ಕಿಲೋಮೀಟರ್ ದೂರ ಸರದಿ ಸಾಲಿನಲ್ಲಿ ಕಾಯುವುದನ್ನ ನಾವು ಗಮನಿಸಿದ್ದೇವೆ , ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ , ಅಲ್ಲದೇ ರಸ್ತೆ ಅಗಲೀಕರಣ , ಉತ್ತಮ ಸುಸಜ್ಜಿತ ಶೌಚಾಲಯ ನಿರ್ಮಾಣ, ಭೋಜನಕೂಟ ಕಟ್ಟಡ ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಕ್ಷೇತ್ರವನ್ನ 2ನೇ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಅಭಿವೃದ್ಧಿ ಮಾಡುವುದಾಗಿ ಹೇಳಿದರು.

Edited By : Vinayak Patil
PublicNext

PublicNext

13/01/2025 02:13 pm

Cinque Terre

19.83 K

Cinque Terre

0