ಜೈಪುರ : ಆಗ್ರಾ ರಸ್ತೆಯ ಕನೋಟಾ ಬಸ್ ನಿಲ್ದಾಣಕ್ಕೆ ಇಳಿಯಬೇಕಿದ್ದ ನಿವೃತ್ತ ಐಎಎಸ್ ಅಧಿಕಾರಿ ಕಂಡಕ್ಟರ್ ನಿಲ್ದಾಣ ಬಂದಿದೆ ಎಂದು ತಿಳಿಸಿಲ್ಲ ಎನ್ನುವ ಕಾರಣಕ್ಕೆ ಬಸ್ ನೈಲಾದಲ್ಲಿ ಮುಂದಿನ ನಿಲ್ದಾಣ ತಲುಪಿದೆ ಈ ವೇಳೆ ಮುಂದಿನ ನಿಲ್ದಾಣಕ್ಕೆ ಹೆಚ್ಚುವರಿ 10 ರೂ. ಪಾವತಿಸಿ ಎಂದು ಕಂಡಕ್ಟರ್ ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ.
ಹೌದು 10 ರೂ.ಗಾಗಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ಜೈಪುರದಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ ಕಳೆದ ಶುಕ್ರವಾರ(ಜ.10) ನಡೆದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಸದ್ಯ ಹೆಚ್ಚುವರಿ ಶುಲ್ಕದ ವಿಚಾರಕ್ಕೆ ಕಂಡಕ್ಟರ್ ನಿವೃತ್ತ ಅಧಿಕಾರಿ ಮೀನ ಅವರ ನಡುವೆ ವಾಗ್ವಾದ ನಡೆದಿದೆ. ಆದರೆ, ಮೀನ ಹಣ ನೀಡಲು ನಿರಾಕರಿಸಿದ್ದಾರೆ. ಕಂಡಕ್ಟರ್, ಮೀನ ಅವರನ್ನು ತಳ್ಳುತ್ತಿದ್ದಂತೆ, ಇವರು ಕಂಡಕ್ಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಕಂಡಕ್ಟರ್ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ ಘಟನೆಗೆ ಸಂಬಂಧಿಸಿ ಬಸ್ ಕಂಡಕ್ಟರ್ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
PublicNext
13/01/2025 02:22 pm