ರಾಮನಗರ: ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಎಲ್ & ಟಿ ಮುಖ್ಯಸ್ಥ ಸುಬ್ರಹ್ಮಣ್ಯ ಮಾನವ ವಿರೋಧಿಗಳು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಮೂರ್ತಿ ವಾರಕ್ಕೆ 70 ಗಂಟೆ ಕೆಲಸ ಮಾಡಿ ಎಂದು ಹೇಳಿದರೆ, ಎಲ್ & ಟಿ ಮುಖ್ಯಸ್ಥ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡಿ ಎಂದು ಹೇಳುತ್ತಾರೆ. ಆದರೆ ವಾರದಲ್ಲಿ ಒಬ್ಬ ಮನುಷ್ಯ 48 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ನಿಯಮವಿದೆ ಎಂದು ತಿಳಿಸಿದರು
PublicNext
13/01/2025 02:32 pm