ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು : ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರ ತಿರಸ್ಕೃತ- ಚುನಾವಣಾ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ

ಪುತ್ತೂರು : ಪಿ.ಎಲ್.ಡಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ಎರಡು ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ್ದ ಒಟ್ಟು ನಾಮಪತ್ರಗಳಲ್ಲಿ ಇಬ್ಬರು ಕಾಂಗ್ರೆಸ್ ಬೆಂಬಲಿತರ ನಾಮಪತ್ರ ತಿರಸ್ಕೃತಗೊಂಡಿತ್ತು. ರಾಜಶೇಖರ್ ಜೈನ್ ಮತ್ತು ಅಶೋಕ್ ರೈ ದೇರ್ಲ ನಾಮಪತ್ರ ತಿರಸ್ಕೃತವಾಗಿತ್ತು. ನಾಮಪತ್ರವನ್ನು ಸರಿಯಾಗಿ ಭರ್ತಿ ಮಾಡದ ಕಾರಣಕ್ಕೆ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದರು‌. ಇದೇ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಶಾಸಕರಿಗೆ ದೂರು ನೀಡಲಾಗಿತ್ತು.

ನಾಮಪತ್ರ ತಿರಸ್ಕರಿಸಲು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ ಶಾಸಕ ಅಶೋಕ್ ಕುಮಾರ್ ರೈಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಅ‌ಧಿಕಾರಿಯನ್ನು ಸಸ್ಪೆಂಡ್ ಮಾಡುವ ಎಚ್ಚರಿಕೆ ನೀಡಿದ್ದಾರೆ.

Edited By : Ashok M
PublicNext

PublicNext

13/01/2025 03:00 pm

Cinque Terre

14.51 K

Cinque Terre

1