ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಅಭಯ ಪಾಟೀಲ್ ಹಾಗೂ ಮೇಯರ್, ಉಪಮೇಯರ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ಆರಂಭಿಸಲಾಯಿತು. ಚನ್ನಮ್ಮ ವೃತ್ತದಿಂದ ಬೆಳಗಾವಿ ಮಹಾನಗರ ಪಾಲಿಕೆ ವರೆಗೆ ಪ್ರತಿಭಟನಾ ರ್‍ಯಾಲಿ ಆರಂಭಿಸಲಾಯಿತು. ಜೈ ಮಹಾರಾಷ್ಟ್ರ ಘೋಷಣೆ ಹಾಕಿದ ಮಹಾರಾಷ್ಟ್ರ ಸಚಿವರಿಗೆ ಬೆಂಬಲ ನೀಡಿದ್ದಕ್ಕೆ ಆಕ್ರೋಶ ಹೊರ ಹಾಕಿದ ಕರವೇ ಕಾರ್ಯಕರ್ತರು, ಶಾಸಕ ಅಭಯ ಪಾಟೀಲ್ ರಾಜೀನಾಮೆ ನೀಡಬೇಕು. ಸರ್ಕಾರ ನಾಡ ವಿರೋಧಿ ಘೋಷಣೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ದಿನದಲ್ಲಿ ಶಾಸಕ ಅಭಯ ಪಾಟೀಲ್ ಮನೆಗೆ ಮುತ್ತಿಗೆ ಹಾಕ್ತೀವಿ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಪಾಲಿಕೆ ಮುಂದೆ ಮೇಯರ್, ಶಾಸಕರ ಪ್ರತಿಕೃತಿ ದಹಿಸಲು ಯತ್ನಿಸಿದ್ದನ್ನು ಪೊಲೀಸರು ತಡೆದು ಪ್ರತಿಕೃತಿ ವಶಕ್ಕೆ ಪಡೆದರು. ಬಳಿಕ ವಾಜೀದ್ ಹಿರೆಕೋಡಿ ಸೇರಿ 10 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
PublicNext
13/01/2025 03:47 pm