ಪ್ರಯಾಗ್‌ರಾಜ್: 12 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.
ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಇಂದು ಬೆಳಗ್ಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.
ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ. ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದೆ. ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆಯಾಗಿದೆ. ಅವಘಡಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.
ಸಂಗಮದಲ್ಲಿ ಶಾಹಿಸ್ನಾನ
ಜನವರಿ 13-ಪೌಷ ಪೂರ್ಣಿಮಾ ಸ್ನಾನ (ಉದ್ಘಾಟನಾ ದಿನ)
ಜನವರಿ 15 – ಮಕರ ಸಂಕ್ರಾಂತಿ ಸ್ನಾನ
ಜನವರಿ 29 – ಮೌನಿ ಅಮಾವಾಸ್ಯೆ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
ಫೆಬ್ರವರಿ 3 – ವಸಂತ ಪಂಚಮಿ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
ಫೆಬ್ರವರಿ 12 – ಮಾಘಿ ಪೂರ್ಣಿಮಾ ಸ್ನಾನ
ಫೆಬ್ರವರಿ 26 – ಮಹಾ ಶಿವರಾತ್ರಿ ಸ್ನಾನ (ಸಮಾಪ್ತಿಯ ದಿನ)
ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳ ನಿರ್ಮಾಣ ಮಾಡಲಾಗಿದೆ.
PublicNext
13/01/2025 04:44 pm