ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಎಂ.ಎಸ್‌.ಪಿ ಜಾರಿಗೆ ಆಗ್ರಹ - ಡಿಸಿ ಕಚೇರಿ ಎದುರು ರೈತ ಸಂಘ ಪ್ರತಿಭಟನೆ

ಹಾಸನ: ಎಂ.ಎಸ್‌.ಪಿ ಜಾರಿ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.

ಕಳೆದ ಹಲವು ವರ್ಷಗಳಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತದೆ ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ರೈತರ ಸಂಪೂರ್ಣ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಿಲ್ಲ ಎಂದು ಪ್ರತಿಭಟನಕಾರರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ರೈತ ದೇಶದ ಬೆನ್ನೆಲುಬು ಎಂದು ನೆಪ ಮಾತ್ರಕ್ಕೆ ಹೇಳಿಕೊಂಡು ರೈತರ ಹಿತರಕ್ಷಣೆಗಾಗಿ ಇರುವ ಕಾನೂನುಗಳನ್ನು ಜಾರಿ ಮಾಡಲು ವಿಳಂಬ ಮಾಡುತ್ತಿವೆ. ರೈತರ ಶಾಸನಬದ್ಧ ಎಂ.ಎಸ್‌.ಪಿ ಜಾರಿಗಾಗಿ ದೆಹಲಿಯಲ್ಲಿ ಹೋರಾಟ ನಡೆಯುತ್ತಿದ್ದರು ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದರು.

ಕೂಡಲೇ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಅನೇಕರೆ ರವಿ, ಬಾಬು, ಸೇರಿದಂತೆ ಹಲವರು ಇದ್ದರು.

Edited By : PublicNext Desk
Kshetra Samachara

Kshetra Samachara

13/01/2025 04:52 pm

Cinque Terre

340

Cinque Terre

0

ಸಂಬಂಧಿತ ಸುದ್ದಿ