ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ 3 ವರ್ಷದ ಮಗುವನ್ನು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಕ್ಕನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಪತ್ನಿ ಶಿಲ್ಪಾ (27), ಪುತ್ರ ದೀಕ್ಷಿತ್ (3)ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದ್ದು,ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
13/01/2025 05:01 pm