ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಶಾಸಕರ ನೇತೃತ್ವದಲ್ಲಿ ಕೊರಗ ಸಮುದಾಯದ ಕುಂದು ಕೊರತೆ ಸಭೆ

ಕಾಪು: 2024-25 ನೇ ಸಾಲಿನ ಕೊರಗ ಸಮುದಾಯದ ಕಾಪು ತಾಲೂಕು ಮಟ್ಟದ ಕುಂದು ಕೊರತೆ ಸಭೆಯು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರಗ ಸಮುದಾಯದ ಕುಂದು ಕೊರತೆ ಬಗ್ಗೆ ಚರ್ಚಿಸಿ ಸರ್ಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯ ಇರುವವರಿಗೆ ಅವರ ಹೆಸರಿನಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಸಮಾಲೋಚನೆ ನಡೆಯಿತು. ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ತಾಲೂಕು ತಹಶೀಲ್ದಾರರಾದ ಪ್ರತಿಭಾ ಆರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಐಟಿಡಿಪಿ ಅಧಿಕಾರಿಗಳಾದ ನಾರಾಯಣ ಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕೊರಗ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/01/2025 05:07 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ