", "articleSection": "Health & Fitness,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1736768488-V10~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarNavalagunda" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ: ತಾಲೂಕಿನ ಬೆಳಹಾರ ಗ್ರಾಮದಲ್ಲಿ ಇರುವ ಸರಕಾರಿ ಆಸ್ಪತ್ರೆಯಲ್ಲಿ ಒಬ್ಬರೇ ವೈದ್ಯರು ಇದ್ದರೂ ಸಹಿತ ಆಸ್ಪತ್ರೆ ಶುಚಿಯಾಗಿದೆ. ಇಲ್ಲಿಯೂ ಸಹಿ...Read more" } ", "keywords": ",Hubballi-Dharwad,Health-and-Fitness,Government,News,Public-News", "url": "https://publicnext.com/node" }
ನವಲಗುಂದ: ತಾಲೂಕಿನ ಬೆಳಹಾರ ಗ್ರಾಮದಲ್ಲಿ ಇರುವ ಸರಕಾರಿ ಆಸ್ಪತ್ರೆಯಲ್ಲಿ ಒಬ್ಬರೇ ವೈದ್ಯರು ಇದ್ದರೂ ಸಹಿತ ಆಸ್ಪತ್ರೆ ಶುಚಿಯಾಗಿದೆ. ಇಲ್ಲಿಯೂ ಸಹಿತ ಸ್ವಚ್ಛತೆ ಕಾಯ್ದುಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಸರಕಾರದ ಗಮನಕ್ಕೆ ತರುತ್ತೇನೆ ಎಂದು ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಪಟ್ಟಣದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸಿಕೊಡುವಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು. ಈ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಬರುವಂತಹವರಿಗೆ ಸೂಕ್ತ ಸೌಲಭ್ಯ ಒದಗಿಸಲಾಗಿದೆ.
ಇನ್ನೂ ಯಂತ್ರೋಪಕರಣಗಳ ನಿರ್ವಹಣೆ ಕುರಿತು ಗಮನ ಹರಿಸಿ ಸಿಬ್ಬಂದಿ ನಿಯೋಜನೆ ಕುರಿತು ಸರಕಾರಕ್ಕೆ ವರದಿ ಮಾಡಲಾಗುವುದು ಎಂದರು. ಈ ವೇಳೆ ತಹಶೀಲ್ದಾರ್ ಸುಧೀರ ಸಾವುಕಾರ, THO ನೀಲಪ್ಪ ಕರ್ಲವಾಡ, ಮುಖ್ಯ ವೈದ್ಯಾಧಿಕಾರಿ ರೂಪಾ ಕಿಣಗಿ, ಸುಭಾಸ ಮಂಗಳಿ, ಮುತ್ತು ಚಿಕ್ಕ ನರಗುಂದ ಇದ್ದರು.
- ಶಂಕರ ಸುಭೇದಾರಮಠ, ಪಬ್ಲಿಕ್ ನೆಕ್ಸ್ಟ್, ನವಲಗುಂದ
Kshetra Samachara
13/01/2025 05:11 pm