ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ವಿದ್ಯುತ್ ಶಾರ್ಟ್ ಸರ್ಕುಟ್ ನಿಂದ ಕಿರಾಣಿ ಅಂಗಡಿಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಬೀದರ್ : ವಿದ್ಯುತ್ ಶಾರ್ಟ್ ಸರ್ಕುಟ್ ನಿಂದ ಅಂಗಡಿಯೊಂದಕ್ಕೆ ಬೆಂಕಿ ತಗುಲಿ, 11 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮವಾದ ಘಟನೆ ಬಸವಕಲ್ಯಾಣ ತಾಲ್ಲೂಕಿನ ಸಸ್ತಾಪುರ್ ಬಂಗ್ಲಾದ ಹತ್ತಿರ ನಡೆದಿದೆ.

ದಿನಾಂಕ 11ರ ರಾತ್ರಿ ವ್ಯವಹಾರ ಮುಗಿದ ನಂತರ ಕಿರಾಣಾ ಅಂಗಡಿಯ ಮಾಲೀಕ, ಸಸ್ತಾಪುರದ ನಿವಾಸಿಯಾದ ಮಹೇಶರೆಡ್ಡಿ ಬಾಬುರೆಡ್ಡಿ ವಡಮುರಗೆ ಅವರು ತಮ್ಮ ಅಂಗಡಿಯನ್ನು ಮುಚ್ಚಿಕೊಂಡು ಮನೆಗೆ ಹೋಗಿದ್ದರು. ಅಂಗಡಿಗೆ ರಾತ್ರಿ ಸುಮಾರು 3 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕುಟ್ ನಿಂದ ಬೆಂಕಿ ತಗಲಿ ಸಂಪೂರ್ಣವಾಗಿ ಹಾನಿಯಾಗಿದೆ.

ಸುದ್ಧಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿದ್ದವು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

13/01/2025 05:22 pm

Cinque Terre

260

Cinque Terre

0