ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನ್ ಮೆಂಟ್ ಅನ್ನು ಮಾರ್ಚ್ 1 ಮತ್ತು 2 ರಂದು ಉಡುಪಿಯ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 1 ರ ಸಂಜೆ 4 ಗಂಟೆಗೆ ಸುಪ್ರೀಂಕೋರ್ಟಿನ ನ್ಯಾಯಧೀಶೆ ಬಿ.ವಿ.ನಾಗರತ್ನ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟಿನ ನ್ಯಾಯಾಲಯದ ಮುಖ್ಯ ನ್ಯಾಯಧೀಶ ಎನ್.ವಿ. ಅಂಜಾರಿಯಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್, ಕರ್ನಾಟಕ ಹೈಕೋರ್ಟಿನ ನ್ಯಾಯಧೀಶ ರಾಜೇಶ್ ರೈ ಕೆ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಉಪಸ್ಥಿತರಿರಲಿದ್ದಾರೆ ಎಂದರು.
ಮಾರ್ಚ್ 2 ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‍ನ ಸದಸ್ಯ ಪಿ.ಪಿ. ಹೆಗ್ಡೆ ಸಮಾರೋಪ ಭಾಷಣ ಮಾಡಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಉಡುಪಿಯ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಿಕ ದಂಡಾಧಿಕಾರಿ ಸಂತೋಷ್ ಶ್ರೀವಸ್ಸ, ಹಿರಿಯ ನ್ಯಾಯವಾದಿಗಳಾದ ಎಂ. ಶಾಂತಾರಾಮ ಶೆಟ್ಟಿ, ಮಟ್ಟಾರ್ ರತ್ನಾಕರ್ ಹೆಗ್ಡೆ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/01/2025 07:55 pm