ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹಾಗೂ ಚಿತ್ರಹಳ್ಳಿ ಪೊಲೀಸ್ ಠಾಣೆಯ ಪ್ರಕರಣಗಳನ್ನು ಅಧಿಕಾರಿಗಳು ಕೈಗೆತ್ತಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭರಮಸಾಗರ ಇನ್ಸ್ಪೆಕ್ಟರ್ ಪ್ರಸಾದ್ ಹಾಗೂ ಸಬ್ ಇನ್ಸ್ಪೆಕ್ಟರ್ ಸುರೇಶ್ ವಿಶೇಷ ತಂಡವನ್ನು ರಚಿಸಿ ಆರೋಪಿಗಳನ್ನ ಹಾವೇರಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ 78 ಗ್ರಾಂ ಚಿನ್ನ, 450 ಗ್ರಾಂ ಬೆಳ್ಳಿ, 4 ಬೈಕ್ ಗಳನ್ನ ವಶಪಡಿಸಿಕೊಂಡಿದ್ದು ಒಟ್ಟು 11 ಲಕ್ಷದ 20 ಸಾವಿರ ರೂಪಾಯಿಗಳು ಕಳ್ಳತನದ ಮೌಲ್ಯವಾಗಿದೆ ಎಂದು ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿ, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
PublicNext
14/01/2025 07:44 am