ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಕಾರು ಅಪಘಾತ - ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದೆ.

ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಇಂದು ಬೆಳಗಿನ ಜಾವ 6 ಗಂಟೆಗೆ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಅಪಘಾತವಾಗಿದೆ.‌ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿದ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್‌ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಕೂಡಾ ಗಾಯವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌

Edited By : Vijay Kumar
PublicNext

PublicNext

14/01/2025 08:54 am

Cinque Terre

226.1 K

Cinque Terre

50