ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾರುಗಳು ಡಿಕ್ಕಿ - ಮಹಿಳೆ ಸಾವು

ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕುಂಬಳೆ ಸಮೀಪದ ಶಿರಿಯದಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಕೊವ್ವಲ್‌ಪಳ್ಳಿ ಮುನ್ನೊಟ್ಟು ವಿಷ್ಣುಮೂರ್ತಿ ಕ್ಷೇತ್ರ ಸಮೀಪದ ನಿವಾಸಿ, ದಿ| ಅಬುಬೂಕರ್ ಅವರ ಪತ್ನಿ ನಫೀಸಾ (62) ಸಾವಿಗೀಡಾದವರು.

ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಯನ್ನು ನೋಡಿ ಮರಳುತ್ತಿದ್ದಾಗ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಫೀಸಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

14/01/2025 09:10 am

Cinque Terre

3.57 K

Cinque Terre

0