ಬೆಳಗಾವಿ: ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್‌ಸಿ ಚೆನ್ನರಾಜ ಅವರಿಗೆ ಗಾಯಗಳಾಗಿವೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗಾಗಾಲೇ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಾರ್‌ನಲ್ಲಿದ್ದ ಗನ್‌ಮ್ಯಾನ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರು ಕೂಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಾ ಮುಂದಿನ ಎರಡು ದಿನದಲ್ಲಿ ಡಿಸ್ಚಾರ್ಜ್ ಆಗಿ ಮನೆಗೆ ಹೊಗುತ್ತಾರೆ ಎಂದು ವೈದ್ಯ ಡಾ. ರವಿ ಪಾಟೀಲ್ ತಿಳಿಸಿದ್ದಾರೆ. ಇನ್ನೂ ಅಪಘಾತತ ಸುದ್ದಿ ತಿಳಿಯುತ್ತಿದಂತೆ ಆಸ್ಪತ್ರೆಗೆ ಕುಟುಂಬಂಸ್ಥರು ದೌಡಾಯಿಸಿದ್ದಾರೆ.
PublicNext
14/01/2025 10:55 am