ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದಾನೆ. ಆರು ವರ್ಷದ ಕಂದಮ್ಮ ಮೇಲೆ ಎರಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದ ವಿನಾಯಕ‌ ಲೇಔಟ್‌ನಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ನಿನ್ನೆ ರಾತ್ರಿ ಈ ಪೈಶಾಚಿಕ ಕೃತ್ಯ ನಡೆದಿದೆ. ಕಟ್ಟಡದ ಸೆಕ್ಯೂರಿಟಿ ಕೆಲಸ ಮಾಡ್ತಿದ್ದ ನೇಪಾಳ ಮೂಲದ ದಂಪತಿ ಮಗುವಿನ ಮೇಲೆ ಅದೇ ಕಟ್ಟಡದಲ್ಲಿ ಕಾರ್ಮಿಕನಾಗಿದ್ದ

ಬಿಹಾರ‌ ಮೂಲದ ಅಭಿಷೇಕ್ ಎರಗಿ ಈ ಕೃತ್ಯ ನಡೆಸಿದ್ದಾನೆ. ಘಟನೆ ನಡೆದ ಕೆಲ ಹೊತ್ತಲ್ಲೆ ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸ್ರಿಗೆ ಒಪ್ಪಿಸಿದ್ದಾರೆ. ಸದ್ಯ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ತನಿಖೆ ನಡೆಸ್ತಿದ್ದಾರೆ.

Edited By : Ashok M
PublicNext

PublicNext

14/01/2025 11:45 am

Cinque Terre

37.7 K

Cinque Terre

14