ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಾಡಾನೆ ಸಾವು 

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ.

ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಎಸಿಎಫ್ ಶಿವರಾಮು, ವಲಯ ಅರಣ್ಯಾಧಿಕಾರಿ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟಿರುವ ಆನೆಗೆ ಸುಮಾರು 40 ವರ್ಷ ವಯಸ್ಸಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು ಆನೆಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Edited By : PublicNext Desk
PublicNext

PublicNext

14/01/2025 01:06 pm

Cinque Terre

8.39 K

Cinque Terre

0