ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ - 19 ಜನ ವಶಕ್ಕೆ

ಚಳ್ಳಕೆರೆ: ಪರಶುರಾಂಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿ 19 ಜನರನ್ನ ವಶಕ್ಕೆ ಪಡೆದಿದ್ದಾರೆ.

ಚಳ್ಳಕೆರೆ ತಾಲೂಕಿನ ದೊಡ್ಡ ಚಲ್ಲೂರು ಫಾರೆಸ್ಟ್ ಏರಿಯಾದಲ್ಲಿ ಗೂಡ್ಸ್ ವಾಹನ ನಿಲ್ಲಿಸಿ ಅದರಲ್ಲೇ ಇಸ್ಪೀಟ್ ಆಡಿತ್ತಿದ್ದ ಕಿರಾತಕರು. ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 21,250 ರೂಪಾಯಿ ಇಸ್ಪೀಟ್ ಕಾರ್ಡ್ ವಶಕ್ಕೆ ಪಡೆದಿದ್ದಾರೆ.

ಬಂಧಿತರು ಆಂಧ್ರಪ್ರದೇಶ ಮೂಲದ ಸತ್ಯಸಾಯಿ ಜಿಲ್ಲೆಯವರಾಗಿದ್ದಾರೆ. ಆರೋಪಿಗಳು ಕಾನೂನು ಬಾಹಿರವಾಗಿ ಅಂದರ್ ಬಾಹರ್ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್ಪಿ ಮಾರ್ಗದರ್ಶನದಲ್ಲಿ ಪರಶುರಾಂಪುರ ಪಿ ಎಸ್ ಐ ಬಸವರಾಜ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ಸಂಬಂಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

14/01/2025 01:41 pm

Cinque Terre

3.04 K

Cinque Terre

0