ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಭೂ ದಾಖಲೆಗಳ ಡಿಜಿಟಲೀಕರಣ

ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಮಾಡಿ ರೈತರಿಗೆ ಮತ್ತು ಭೂ ಮಾಲೀಕರಿಗೆ ತೊಂದರೆಯಾಗದಂತೆ ಲಕ್ಷಾಂತರ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಪ್ರಕ್ರಿಯೆ ಪ್ರಾರಂಭಿಸಿದ್ದು, ಎರಡ್ಮೂರು ತಿಂಗಳೊಳಗಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತದೆ ಎಂದು ಶಾಸಕ ಬಿ.ಎನ್ ರವಿಕುಮಾರ್ ತಿಳಿಸಿದರು.

ಶಿಡ್ಲಘಟ್ಟ ನಗರದ ತಾಲೂಕು ಕಚೇರಿಯಲ್ಲಿ ರಾಜ್ಯ ಸರ್ಕಾರದ ಭೂ ಸುರಕ್ಷಣೆ ಯೋಜನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ಭೂಸರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ನೀಡಲಾಗುತ್ತದೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 95 ಲಕ್ಷ ಪುಟಗಳು ಸ್ಕ್ಯಾನ್ ಮಾಡುವ ಕಾರ್ಯ ನಡೆಯುತ್ತಿದೆ. ಕಂದಾಯ ಇಲಾಖೆಯ ಶಿರಸ್ತೇದಾರ್ ಈ ಕಾರ್ಯಕ್ರಮದಲ್ಲಿ 6 ಜನ ಹೊರಗುತ್ತಿಗೆದಾರರನ್ನು ಸೇವೆಗೆ ನೇಮಿಸಿ ಕಾರ್ಯವನ್ನು ಆರಂಭಿಸಿ ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಹಸಿಲ್ದಾರ್ ಬಿ.ಎನ್ ಸ್ವಾಮಿ ಮಾತನಾಡಿ ಹಳೆಯ ದಾಖಲೆಗಳು ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್‌ ದಾಖಲಾಗಿ ಪರಿವರ್ತಿಸಿ ರೆಕಾರ್ಡ್ ಕೊಠಡಿಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಗಾಗಿ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು ಮತ್ತು ತಿದ್ದಲು ಅಸಾಧ್ಯವಾಗದೆ ನೇರವಾಗಿ ನೀವೇ ಡಿಜಿಟಲ್ ಮಾಧ್ಯಮದಿಂದ ಭೂದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ, ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಿಳಿಸುವ ಭೂ ಸುರಕ್ಷಾ ಯೋಜನೆಯನ್ನು ಸರ್ಕಾರ ನಮಗೆ ಜಾರಿ ಮಾಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಶಿರಸ್ತೇದಾರ್ ಆಸಿಯಾಬಿ, ಮುಖಂಡರಾದ ತಾದೂರು ರಘು ಸೇರಿದಂತೆ ಇಲಾಖಾ ಅಧಿಕಾರಿಗಳು ಪಾಲ್ಗೊಂಡಿದ್ದರು.

Edited By : Ashok M
PublicNext

PublicNext

14/01/2025 01:58 pm

Cinque Terre

26.84 K

Cinque Terre

0