ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿರುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.
ಇಂದು ಬೆಳ್ಳಂಬೆಳಿಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದಾಗ ಭೀಕರ ಅಪಘಾತವಾಗಿದ್ದು, ಅವರ ಜೊತೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಕೂಡ ಕಾರಿನಲ್ಲಿ ಇದ್ದು ಅವರಿಗೂ ಗಾಯಗಳಾಗಿವೆ. ಅವರಿಗೆ ಅಪಘಾತ ನಡೆದ ಸ್ಥಳದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿರುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ದೃಶ್ಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ವ್ಹೀಲ್ ಚೇರ್ ಮೇಲೆ ಇದ್ದರೆ ಚನ್ನರಾಜ್ ಹಟ್ಟಿಹೊಳಿ ಅವರು ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಾಣಬಹುದು.
PublicNext
14/01/2025 02:12 pm