", "articleSection": "Government,Agriculture", "image": { "@type": "ImageObject", "url": "https://prod.cdn.publicnext.com/s3fs-public/418299-1736845129-AKROSHA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ: ಬೆಳೆ ವಿಮೆ ಪರಿಹಾರ ಹಣ ಜಮಾ ಆಗದೇ ಇರುವುದನ್ನು ಖಂಡಿಸಿ ರೈತರು ತೋಟಗಾರಿಕಾ ಇಲಾಖೆಗೆ ಬೀಗ ಹಾಕಲು ಯತ್ನಿಸಿದ ಘಟನೆ ಸೋಮವಾರ ನಡೆಯಿತು...Read more" } ", "keywords": "Sirsi, Crop Insurance Claims, Delayed Compensation, Horticulture Department, Farmer Welfare, Karnataka Government, Agriculture Insurance Scheme, Crop Damage, Farmer Protests.,Uttara-Kannada,Government,Agriculture", "url": "https://publicnext.com/node" }
ಶಿರಸಿ: ಬೆಳೆ ವಿಮೆ ಪರಿಹಾರ ಹಣ ಜಮಾ ಆಗದೇ ಇರುವುದನ್ನು ಖಂಡಿಸಿ ರೈತರು ತೋಟಗಾರಿಕಾ ಇಲಾಖೆಗೆ ಬೀಗ ಹಾಕಲು ಯತ್ನಿಸಿದ ಘಟನೆ ಸೋಮವಾರ ನಡೆಯಿತು.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ ಎದುರು ಪ್ರತಿಭಟನೆ ನಡೆಸಿದ ರೈತರು ವಿಮಾ ಪರಿಹಾರ ಹಣ ಎರಡ್ಮೂರು ತಿಂಗಳು ಕಳೆದರೂ ರೈತರಿಗೆ ನೀಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ವಿಮಾ ಕಂಪನಿಯ ಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಹಣ ಬಿಡಗಡೆ ಆಗುವವರೆಗೆ ಇಲಾಖೆ ಕಚೇರಿ ಬೀಗ ಹಾಕಿಡುವುದಕ್ಕೂ ಮುಂದಾದರು. ಆದರೆ ಇದಕ್ಕೆ ಪೊಲೀಸ್ರು ಅವಕಾಶ ನೀಡಲಿಲ್ಲ.
ನಾವೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ನಾವು ಕಟ್ಟಿದ ವಿಮಾ ಕಂತಿಗೆ ಪರಿಹಾರ ಕೊಡಿ ಎಂದು ಕೇಳುತ್ತಿದ್ದೇವೆ. ಕಂತಿನ ಹಣ ತುಂಬಿಸಿಕೊಳ್ಳುವುದಕ್ಕೆ ಸಮಯಕ್ಕೆ ಸರಿಯಾಗಿ ಮಾಡಲಾಗುತ್ತದೆ. ಆದರೆ ಪರಿಹಾರ ನೀಡುವಾಗ ಈ ನಾಟಕ ಯಾಕೆ ಎಂದು ಆಕ್ರೋಶದಿಂದ ಪ್ರಶ್ನಿಸಿದರು.
ಇದೇ ವಿಷಯವಾಗಿ ದಾಸನಕೊಪ್ಪದಲ್ಲಿ ರಸ್ತೆ ತಡೆ ನಡೆಸಿದ್ದೇವೆ. ಸಹಾಯಕ ಆಯುಕ್ತರ ನೇತೃತ್ವದಲ್ಲಿ ರೈತರ ಸಭೆ ನಡೆದಿದೆ. ಆದರೂ ಹಣ ಬಿಡುಗಡೆಯಾಗಿಲ್ಲ. ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ ಪರಿಹಾರ ನೀಡಲಾಗಿದೆ. ಜಿಲ್ಲೆಯ ರೈತರಿಗೆ ಮಾತ್ರ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಮಾ ಕಂಪನಿಯ ಜಿಲ್ಲಾ ಕೋ-ಆರ್ಡಿನೇಟರ್ ಅಣ್ಣಪ್ಪ ನಾಯ್ಕ ಜಿಲ್ಲೆಯ ೧೩೬ ಗ್ರಾಪಂಗಳ ಮಳೆ ಮಾಪನ ಮಾಹಿತಿಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದವರು ಸರಿಯಾಗಿ ಮಾಹಿತಿ ನೀಡದೇ ಇರುವುದರಿಂದ ಸಮಸ್ಯೆಯಾಗಿದೆ. ಜ.೧೫ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನ ಆಗುವ ನಿರೀಕ್ಷೆಯಿದೆ ಎಂದರು. ಆ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಜ.೧೬ರಂದು ಮಳಗಿಯಲ್ಲಿ ರಸ್ತೆ ತಡೆ ನಡೆಸುವ ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ದ್ಯಾಮಣ್ಣ ದೊಡ್ಮನಿ, ಪ್ರಶಾಂತ ಗೌಡ, ರಾಜೇಶ ನಾಯ್ಕ, ಸುರೇಶ ನಾಯ್ಕ. ಆರ್.ಜಿ.ಹೆಗಡೆ ಬೆಳ್ಳೆಕೇರಿ ಸೇರಿದಂತೆ ಹಲವರು ಪಾಲ್ಗೊಂಡರು. ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸತೀಶ ಹೆಗಡೆ, ತಾಲೂಕು ಅಧಿಕಾರಿ ಗಣೇಶ ಹೆಗಡೆ ಹಾಜರಿದ್ದರು.
PublicNext
14/01/2025 02:29 pm