ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಸಂಕ್ರಾಂತಿ ಹಿನ್ನೆಲೆ- ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತರ ದಂಡು

ನಂಜನಗೂಡು: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ನಂಜುಂಡೇಶ್ವರನ ದರ್ಶನ ಪಡೆದು ಭಕ್ತರು ಪುನೀತರಾದರು.

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಕ್ಷೀರಾಭಿಷೇಕ , ರುದ್ರಭಿಷೇಕ, ಫಲಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ನಂತರ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.

ದೇವಾಲಯಕ್ಕೆ ಭಕ್ತರು ಆಗಮಿಸಿ ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಮುಡಿ ಸೇವೆ, ದೀಪ ದೂಪದ ಸೇವೆ, ತುಲಾಭಾರ ಸೇವೆ ಮಾಡಿ ಶ್ರೀ ನಂಜುಂಡೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಭಕ್ತರು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಂಡರು.

ಸಂಕ್ರಾಂತಿಯ ಹಬ್ಬದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ತಂಡೋಪ ತಂಡವಾಗಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.

Edited By : Manjunath H D
PublicNext

PublicNext

14/01/2025 04:14 pm

Cinque Terre

36.95 K

Cinque Terre

0